* ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಹೊಂದಿರುವ ₹50 ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ(ಫೆ.12) ಘೋಷಿಸಿದೆ.* ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರ ಅಧಿಕಾರಕಾಲ ಮುಕ್ತಾಯಗೊಂಡ ನಂತರ ಕಳೆದ ವರ್ಷದ ಡಿಸೆಂಬರ್ನಲ್ಲಿ ಮಲ್ಹೋತ್ರಾ ಹುದ್ದೆಗೆ ಅಧಿಕಾರದಲ್ಲಿದ್ದಾರೆ.* ಮಹಾತ್ಮ ಗಾಂಧಿ ಅವರ ಚಿತ್ರ ಹೊಂದಿರುವ ನೋಟುಗಳ ಶ್ರೇಣಿಯಂತೆ ಈ ಹೊಸ ನೋಟುಗಳ ವಿನ್ಯಾಸ ಮಾಡಲಾಗಿದೆ. ಹಳೆಯ ನೋಟುಗಳಿಗೆ ಅನ್ವಯಿಸುವ ನಿಯಮಗಳು ಇವುಗಳಿಗೂ ಅನ್ವಯವಾಗಲಿವೆ ಎಂದು ತಿಳಿಸಲಾಗಿದೆ.* ಹೊಸ ನೋಟುಗಳನ್ನು ಮುದ್ರಿಸಿದರೂ, ಹಳೆಯ ನೋಟುಗಳು ಎಂದಿನಂತೆ ಚಲಾವಣೆಯಲ್ಲಿ ಇರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ. ದೇಶದ ಜನರು ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದೆ.