Job Description: * 95 ನೇ ಆಸ್ಕರ್ ಪ್ರಶಸ್ತಿ ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆದಿದ್ದು, ರಾಜಮೌಳಿ ನಿರ್ದೇಶನದ 'RRR' ಸಿನಿಮಾದ 'ನಾಟು ನಾಟು' ಹಾಡಿಗೆ ಆಸ್ಕರ್ ಪ್ರಶಸ್ತಿ ದೊರೆತಿದೆ. ಈ ಹಾಡಿಗೆ ಈ ಹಿಂದೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕಿತ್ತು.* ಈ ಹಾಡನ್ನು ಚಂದ್ರಬೋಸ್ ರವರು ಬರೆದಿದ್ದು, ಎಂ.ಎಂ ಕಿರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ. 1920 ರ ಹಿನ್ನಲೆಯಲ್ಲಿ, RRR ಚಿತ್ರದಲ್ಲಿ ಎನ್ಟಿಆರ್ ಕೊಮುರಂ ಭೀಮ್ ಮತ್ತು ರಾಮ್ ಚರಣ್ ಅಲ್ಲೂರಿ ಸೀತಾರಾಮರಾಜ್ ಪಾತ್ರದಲ್ಲಿ ನಟಿಸಿದ್ದಾರೆ. * 'RRR' ಸಿನಿಮಾದ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.