* ‘ನೆವರ್‌ ಗೀವ್‌ ಅಪ್‌’ ಎಂಬ ಘೋಷವಾಕ್ಯದೊಂದಿಗೆ ರಿಂಗ್ ನಲ್ಲಿ ಕಾದಾಡುತ್ತಿದ್ದ ಮೆಗಾ ಸ್ಟಾರ್ ಜಾನ್ ಸೀನ(John Cena) ಇದೀಗ ತಮ್ಮ ರಸ್ಲಿಂಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. * ಡಬ್ಲ್ಯೂ ಡಬ್ಲ್ಯೂಇ(WWE) ಬಾಕ್ಸಿಂಗ್ ರಿಂಗ್ನಲ್ಲಿ 16 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಖ್ಯಾತ ರೆಸ್ಲರ್ ಜಾನ್ ಸೀನ(John Cena) ತಮ್ಮ ರೆಸ್ಲಿಂಗ್ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದಾರೆ. * ಟೊರೊಂಟೋದಲ್ಲಿ ನಡೆದ ಮನಿ ಇನ್ ದಿ ಬ್ಯಾಂಕ್ ಟೂರ್ನಿಯಲ್ಲಿ ತಮ್ಮ ನಿವೃತ್ತಿ ಪ್ರಕಟಿಸಿದ್ದಾರೆ.* '‘ದಿ ಲಾಸ್ಟ್ ಟೈಮ್ ಈಸ್ ನೌ” ಎಂದು ಬರೆದ ಟಿ-ಶರ್ಟ್ ಧರಿಸಿ ಸೀನಾ ತನ್ನ ನಿವೃತ್ತಿಯನ್ನು ಪ್ರಕಟಿಸಿದರು. ಈ ವರ್ಷ ನಡೆಯುವ 2024ರ ರಾಯಲ್ ರಂಬಲ್, ಎಲಿಮಿನೇಶನ್ ಚೇಂಬರ್ ಮತ್ತು ರಸಲ್ ಮೇನಿಯಾ 41ರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮುಂದಿನ ವರ್ಷ 2025ರಲ್ಲಿ ರಿಂಗ್ ನಲ್ಲಿ ನಿವೃತ್ತಿಯಾಗಲಿದ್ದಾರೆ. * 2002ರಲ್ಲಿ ಡಬ್ಲ್ಯೂ ಡಬ್ಲ್ಯೂಇ ಕಂಪನಿಗೆ ಸೇರಿದ ಜಾನ್ ಸೀನ 13 ಬಾರಿ ಡಬ್ಲ್ಯೂ ಡಬ್ಲ್ಯೂಇ ಟೈಟಲ್, ಮೂರು ಬಾರಿ ಹೆವಿವೈಟ್ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ರಾಯಲ್ ರಂಬಲ್ ಗೆಲುವು ಸಾಧಿಸಿದ್ದಾರೆ.* ಪ್ರಸ್ತುತ ಜಾನ್ ಸೀನಾ ಅವರಿಗೆ 47 ವರ್ಷ ವಯಸ್ಸಾಗಿದೆ. WWE ಮಾತ್ರವಲ್ಲದೇ ಹಾಲಿವುಡ್ ಸಿನಿಮಾಗಳಲ್ಲೂ ಜಾನ್ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ಈಗ ಸಿನಿಮಾ ರಂಗದ ಕಡೆಗೆ ಸಂಪೂರ್ಣ ಗಮನ ಕೇಂದ್ರಿಕರಿಸಿರುವ ಅವರು ಸದ್ಯ WWE ರಿಂಗ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.