* ದೇಶದ ಅತಿ ಉದ್ದದ ರಸ್ತೆ ಸಂಪರ್ಕ ಜಾಲ ಹೊಂದಿದ ದೇಶಗಳ ಪಟ್ಟಿಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನ ಪಡೆದುಕೊಂಡಿದೆ.* "ಅಮೆರಿಕ ನಂತರ ವಿಶ್ವದಲ್ಲಿ ಅತ್ಯಂತ ಹೆಚ್ಚು ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲ ಹೊಂದಿದ ರಾಷ್ಟ್ರವಾಗಿ ಭಾರತ ಎಂಬ ಕೀರ್ತಿ ಪಡೆದಿದೆ,'' ಎಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. * 2014ರ ಬಳಿಕ ದೇಶದಲ್ಲಿ 1.45 ಲಕ್ಷ ಕಿ.ಮೀ. ರಸ್ತೆ ನಿರ್ಮಾಣ ಮಾಡುವ ಮೂಲಕ ಚೀನಾವನ್ನು ಹಿಂದಿಕ್ಕಿದ ಭಾರತ ಎರಡನೇ ಸ್ಥಾನಕ್ಕೆ ಏರಿದೆ ಎಂದು ಸಚಿವ ಗಡ್ಕರಿ ಅವರು ಮಾಹಿತಿ ನೀಡಿದ್ದಾರೆ.