* ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು 'ಅನ್ನ ಚಕ್ರ' ಮತ್ತು SCAN (NFSA ಗಾಗಿ ಸಬ್ಸಿಡಿ ಕ್ಲೈಮ್ ಅಪ್ಲಿಕೇಶನ್) ಪೋರ್ಟಲ್ ಅನ್ನು ಪ್ರಾರಂಭಿಸಿದರು.* ಭಾರತ, ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಉಚಿತ ಪಡಿತರ ಪೂರೈಸುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದರು.* ಡಿಸೆಂಬರ್ 06 ರಂದು "ಅನ್ನ ಚಕ್ರ" ಹೊಸ ಪೋರ್ಟಲ್ ಗೆ ಜೋಶಿ ಅವರು ಚಾಲನೆ ನೀಡಿದರು. ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ ಆಹಾರ ಧಾನ್ಯ ನೀಡುತ್ತಿದೆ ಎಂದು ತಿಳಿಸಿದರು.* "ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ ಉಚಿತ ಪಡಿತರ ಯೋಜನೆ ವಿಸ್ತರಿಸಿದೆ. ಪ್ರಸ್ತುತದಲ್ಲಿ ಕೆಲ ಫಲಾನುಭವಿಗಳು 1- 3 ಕೆಜಿ ಅತ್ಯಲ್ಪ ಬೆಲೆಯಲ್ಲಿ ಪ್ರತಿ ತಿಂಗಳು ಪಡಿತರ ಧಾನ್ಯ ಪಡೆಯುತ್ತಿದ್ದಾರೆ" ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.* ಆಹಾರ ಭದ್ರತಾ ಯೋಜನೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು ಮತ್ತು ಕೊನೆಯದಾಗಿ ಫೆಬ್ರವರಿ 2023 ರಲ್ಲಿ ವಿಸ್ತರಿಸಲಾಯಿತು ಎಂದು ಕೇಂದ್ರ ಸಚಿವ ಜೋಶಿ ಅವರು ತಿಳಿಸಿದರು.* ಸೂರ್ಯ ಘರ್ ಯೋಜನೆಯಡಿ 40, 000 ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿವೆ. ಮುಂದಿನ 8 ತಿಂಗಳಲ್ಲಿ ಹೆಚ್ಚುವರಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲಾಗುವುದು ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ.