* ಭಾರತ ಮತ್ತು ಆಸ್ಟ್ರೇಲಿಯಾ ಸೆಪ್ಟೆಂಬರ್ 24 ರಂದು (ಬುಧವಾರ) ಸಾವಯವ (ಆರ್ಗ್ಯಾನಿಕ್) ಉತ್ಪನ್ನಗಳ ಸಾಗಣೆಗೆ ಅನುಕೂಲವಾಗುವಂತೆ ಪರಸ್ಪರ ಗುರುತಿಸುವಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು ಇಬ್ಬರ ಮಧ್ಯದ ವ್ಯಾಪಾರ ಸಂಬಂಧಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.* ಭಾರತ ಮತ್ತು ಆಸ್ಟ್ರೇಲಿಯಾ ವಿಶಾಲವಾದ ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ECTA) ಅಡಿಯಲ್ಲಿ ಸಾವಯವ ಉತ್ಪನ್ನಗಳಿಗಾಗಿ ಪರಸ್ಪರ ಗುರುತಿಸುವಿಕೆ ಒಪ್ಪಂದ (MRA)ಕ್ಕೆ ಸಹಿ ಹಾಕಿದವು. * ಸಾವಯವ ವ್ಯಾಪಾರವನ್ನು ಬಲಪಡಿಸುವ, ಪ್ರಮಾಣೀಕರಣ ಪ್ರಕ್ರಿಯೆಗಳನ್ನು ಸರಳಗೊಳಿಸುವ ಮತ್ತು ಎರಡೂ ರಾಷ್ಟ್ರಗಳಲ್ಲಿ ಪ್ರಮಾಣೀಕೃತ ಸಾವಯವ ಉತ್ಪಾದಕರಿಗೆ ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವ ಕಡೆಗೆ ಈ MRA ಒಂದು ಮಹತ್ವದ ಹೆಜ್ಜೆಯಾಗಿದೆ.* MRA ಗಾಗಿ ಅನುಷ್ಠಾನಗೊಳಿಸುವ ಸಂಸ್ಥೆಗಳು ಭಾರತದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA), ಮತ್ತು ಆಸ್ಟ್ರೇಲಿಯಾ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ (DAFF) ಆಗಿವೆ.