* ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡುವ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.* ಸಚಿನ್ ತೆಂಡೂಲ್ಕರ್ ಅವರಿಗೆ ಶನಿವಾರ(ಫೆ.01) ನಡೆಯುವ ಬಿಸಿಸಿಐ ವಾರ್ಷಿಕ ಉತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.* ಭಾರತದ ಪರ ಸಚಿನ್ ತೆಂಡೂಲ್ಕರ್ 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರು ಏಕದಿನ ಕ್ರಿಕೆಟ್ ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.* ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 200 ಟೆಸ್ಟ್ ಮತ್ತು 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 15921 ಟೆಸ್ಟ್ ರನ್ ಮತ್ತು18426 ಏಕದಿನ ರನ್ ಕಲೆ ಹಾಕಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯವನ್ನಾಡಿದ್ದಾರೆ.* ಕ್ರಿಕೆಟ್ ಕ್ಷೇತ್ರಕ್ಕೆ ಸಚಿನ್ ಅವರು ನೀಡಿದ ಕೊಡುಗೆ ಗಮನಿಸಿ, ಬಿಸಿಸಿಐ 2024ನೇ ಸಾಲಿನ ಕರ್ನಲ್ ಸಿ.ಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ.* 2023ನೇ ಸಾಲಿನಲ್ಲಿ ಈ ಪ್ರಶಸ್ತಿ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಮಾಜಿ ವಿಕೆಟ್ ಕೀಪರ್ ಫಾರೂಕ್ ಎಂಜಿನಿಯರ್ ಅವರಿಗೆ ಲಭಿಸಿತ್ತು.* ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯು ಭಾರತೀಯ ಕ್ರಿಕೆಟ್ಗೆ ಅಪ್ರತಿಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡುವ ಪ್ರಶಸ್ತಿಯಾಗಿದೆ .* ಇದು ಮಾಜಿ ಆಟಗಾರನಿಗೆ BCCI ನೀಡಿದ ಅತ್ಯುನ್ನತ ಗೌರವವಾಗಿದೆ ಮತ್ತು ಕ್ರಿಕೆಟ್ನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಪ್ರಶಸ್ತಿಯು ಟ್ರೋಫಿ, ಪ್ರಶಸ್ತಿ ಪತ್ರ ಮತ್ತು ₹ 25 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.* 1916 ರಿಂದ 1963 ರವರೆಗೆ 47 ವರ್ಷಗಳ ಕಾಲ ಪ್ರಥಮ ದರ್ಜೆಯ ವೃತ್ತಿಜೀವನವನ್ನು ಹೊಂದಿರುವ ಭಾರತದ ಮೊದಲ ಟೆಸ್ಟ್ ಕ್ರಿಕೆಟ್ ನಾಯಕ ಕರ್ನಲ್ CK ನಾಯುಡು (1895-1967) ಅವರ ಹೆಸರನ್ನು ಈ ಪ್ರಶಸ್ತಿಗೆ ಹೆಸರಿಸಲಾಗಿದೆ.