* ಲೀಡ್ಸ್ನ ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ 83 ರನ್ಗಳಿಗೆ ಐದು ವಿಕೆಟ್ಗಳನ್ನು ಕಬಳಿಸಿದರು. 83 ರನ್ಗಳಿಗೆ 5 ವಿಕೆಟ್ಗಳನ್ನು ಪಡೆಯುವ ಮೂಲಕ ಬುಮ್ರಾ SENA (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ 150 ಟೆಸ್ಟ್ ವಿಕೆಟ್ಗಳನ್ನು ಪಡೆದ ಏಷ್ಯಾದ ಮೊದಲ ಬೌಲರ್ ಎನಿಸಿಕೊಂಡರು. * ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯವು ಬುಮ್ರಾ ಅವರ ಸೆನಾ ದೇಶಗಳಲ್ಲಿ 32 ನೇ ಟೆಸ್ಟ್ ಪಂದ್ಯವಾಗಿದ್ದು, ಈಗ ಅವರು ಒಟ್ಟು 150 ವಿಕೆಟ್ಗಳನ್ನು ಕಬಳಿಸಿದ್ದಾರೆ.* SENA ದೇಶಗಳಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ಗಳು (ಏಷ್ಯನ್ ಬೌಲರ್ಗಳಿಂದ) : ಜಸ್ಪ್ರೀತ್ ಬುಮ್ರಾ – 150*ವಾಸಿಂ ಅಕ್ರಮ್ - 146ಅನಿಲ್ ಕುಂಬ್ಳೆ - 141ಇಶಾಂತ್ ಶರ್ಮಾ - 130ಮುತ್ತಯ್ಯ ಮುರಳೀಧರನ್ - 125* ಇಂಗ್ಲೆಂಡ್ನಲ್ಲಿ ಇದುವರೆಗೆ ಆಡಿರುವ 10 ಟೆಸ್ಟ್ಗಳಲ್ಲಿ ಬುಮ್ರಾ 42 ವಿಕೆಟ್ಗಳನ್ನು ಪಡೆದಿದ್ದಾರೆ. ನ್ಯೂಜಿಲೆಂಡ್ನಲ್ಲಿ ನಡೆದ ಎರಡು ಟೆಸ್ಟ್ಗಳಲ್ಲಿ 6 ವಿಕೆಟ್ಗಳು, ಆಸ್ಟ್ರೇಲಿಯಾದಲ್ಲಿ ನಡೆದ 12 ಟೆಸ್ಟ್ಗಳಲ್ಲಿ 64 ವಿಕೆಟ್ಗಳು ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎಂಟು ಟೆಸ್ಟ್ಗಳಲ್ಲಿ 38 ವಿಕೆಟ್ಗಳನ್ನು ಪಡೆದಿದ್ದಾರೆ.