* ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣತಜ್ಞರ ಅಪಾರ ಕೊಡುಗೆಗಳನ್ನು ಗೌರವಿಸಲು ರಾಷ್ಟ್ರವು ಶಿಕ್ಷಕತಜ್ಞ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸುತ್ತದೆ.* ಡಾ.ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿ, ಮೊದಲ ಉಪರಾಷ್ಟ್ರಪತಿ ಮತ್ತು ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು.* ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನವನ್ನು ವ್ಯಕ್ತಿಗತವಾಗಿ ಆಚರಿಸುವ ಬದಲು ಶಿಕ್ಷಕರ ಕೊಡುಗೆಗಳನ್ನು ಗೌರವಿಸುವ ದಿನವನ್ನಾಗಿ ಮಾಡಲು ಸಲಹೆ ನೀಡಿದರು. ಇದರಿಂದಲೇ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವೆಂದು ಆಚರಿಸುವ ಪದ್ಧತಿ ಆರಂಭವಾಯಿತು.* ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ ಸೆಪ್ಟೆಂಬರ್ 5, 1888 ರಂದು ಜನಿಸಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕಲ್ಕತ್ತಾ ವಿಶ್ವವಿದ್ಯಾಲಯ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಶೈಕ್ಷಣಿಕ ದಿಗ್ಗಜರಾಗಿದ್ದರು.* ಮದ್ರಾಸ್ ಪ್ರೆಸಿಡೆನ್ಸಿ, ಕಾಲೇಜು ಮೈಸೂರು ವಿಶ್ವವಿದ್ಯಾಲಯ, ಕಲ್ಕತ್ತ ವಿಶ್ವವಿದ್ಯಾಲಯ, ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಫ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ.* ಶಿಕ್ಷಣ ಮತ್ತು ತತ್ತ್ವಶಾಸ್ತ್ರಕ್ಕೆ ಅವರ ಕೊಡುಗೆಗಳು ಅವರಿಗೆ 1931ರಲ್ಲಿ ನೈಟ್ಹುಡ್ ಮತ್ತು 1936 ಮತ್ತು 1937 ರಲ್ಲಿ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನಗಳು ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿವೆ.* ಡಾ. ರಾಧಾಕೃಷ್ಣನ್ ಅವರು 1962 ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾದಾಗ ಅವರ ಹಿಂದಿನ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಅವರ ಜನ್ಮದಿನವನ್ನು ಆಚರಿಸಲು ಯೋಜಿಸಿದ್ದರು. ಅವರ ಆಹ್ವಾನಕ್ಕೆ ಉತ್ತರಿಸಿದ ರಾಧಾಕೃಷ್ಣನ್ ಅವರು ನನ್ನ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಿದರೆ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದರಂತೆ. ಹೀಗಾಗಿ 1962ರಲ್ಲಿ ಮೊದಲ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.* ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಶಿಕ್ಷಕರು ಜ್ಞಾನ ಮಾತ್ರವಲ್ಲ, ಜೀವನ ಮೌಲ್ಯಗಳು, ಶಿಸ್ತಿನ ಮಾರ್ಗ ಮತ್ತು ರಾಷ್ಟ್ರಪ್ರೇಮವನ್ನು ವಿದ್ಯಾರ್ಥಿಗಳಿಗೆ ಬೋಧಿಸುತ್ತಾರೆ. ರಾಷ್ಟ್ರಪತಿ ಪ್ರತಿಭಾನ್ವಿತ ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ.