* ಪ್ರತಿ ವರ್ಷ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸಲು ಕಾಡುಗಳನ್ನು ಉಳಿಸಲು ತಮ್ಮ ಪ್ರಾಣವನ್ನು ಅರ್ಪಿಸಿದವರನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.* ಕೇಂದ್ರ ಸರ್ಕಾರವು 2013 ರಲ್ಲಿ, ಪರಿಸರ ಮತ್ತು ಅರಣ್ಯ ಸಚಿವಾಲಯವು ಪ್ರತಿ ವರ್ಷ ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ ಎಂದು ಘೋಷಿಸಿತು. * ಅರಣ್ಯ ರಕ್ಷಣಾ ಸಿಬ್ಬಂದಿ ಪಿ.ಶ್ರೀ ನಿವಾಸ್ ಅವರ ಸ್ಮರಣಾರ್ಥವಾಗಿ ಮೊದಲಿಗೆ ಕರ್ನಾಟಕ ಪ್ರತಿ ವರ್ಷ ನವೆಂಬರ್ 11 ರಂದು ಅರಣ್ಯ ಹುತಾತ್ಮರ ದಿನವನ್ನು ಆಚರಿಸಲು ಆರಂಬಿಸಲಾಯಿತ್ತು.* ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು, ಅರಣ್ಯ ಕಾರ್ಮಿಕರ ಮಹತ್ವ ಮತ್ತು ಪರಿಸರ ಮತ್ತು ವನ್ಯಜೀವಿಗಳನ್ನು ಕಾಪಾಡುವಲ್ಲಿ ಅವರ ನಿರ್ಣಾಯಕ ಪಾತ್ರವನ್ನು ಅರ್ಥಮಾಡಿಕೊಳ್ಳಲು ಜನರಿಗೆ ಸಹಾಯ ಮಾಡಲು ಜಾಗೃತಿ ಉಪಕ್ರಮಗಳನ್ನು ಯೋಜಿಸಲಾಗಿದ್ದು, ಭಾರತದಾದ್ಯಂತ ಶಿಕ್ಷಣ ಸಂಸ್ಥೆಗಳು ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.