* ಶಹಪುರ್‌ ಕಂಡಿ ಬ್ಯಾರೇಜ್‌ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶಹಪುರ್ ಕಂಡಿ ಬ್ಯಾರೇಜ್ ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿದೆ.* ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡ ನಂತರ ರಾವಿ ನದಿಯಿಂದ ಪಾಕಿಸ್ತಾನಕ್ಕೆ ಅಭಿಮುಖವಾಗಿ ಹರಿವು ನೀರನ್ನು ತಡೆಯಲಾಗಿದೆ. ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ 32,000 ಹೆಕ್ಟರ್ ಭೂಮಿ ನೀರಾವರಿ ಸೌಲಭ್ಯಕ್ಕೆ ಒಳಪಡಲಿದೆ.* ಶಾಹ್ ಪುರ್-ಕಂಡಿ ಬ್ಯಾರೇಜ್‌ನ ನೀರಾವರಿ ಮತ್ತು ಜಲವಿದ್ಯುತ್ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಈ ಕುರಿತ ವರದಿ ತಿಳಿಸಿದೆ. * 1995ರಲ್ಲಿ ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಶಂಕುಸ್ಥಾಪನೆ ನೆರವೇರಿಸಿದ್ದರು. ಬ್ಯಾರೇಜ್ ನಿರ್ಮಾಣಕ್ಕೆ ಜಮ್ಮು ಕಾಶ್ಮೀರ ಹಾಗೂ ಪಂಜಾಬ್ ಸರ್ಕಾರಗಳ ನಡುವೆ ವಿವಾದವಿತ್ತು. 2018ರ ಡಿಸೆಂಬರ್‌ನಲ್ಲಿ ಕೇಂದ್ರದ ಸಮ್ಮತಿಯೊಂದಿಗೆ ನಿರ್ಮಾಣ ಪುನರಾರಂಭವಾಗಿತ್ತು.* 1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಆಗಿದ್ದ ಇಂಡಸ್ ಜಲ ಒಪ್ಪಂದದ (ಐಡಬ್ಲ್ಯೂಟಿ) ಪ್ರಕಾರ ರಾವಿ, ಸಟ್ಲೆಜ್, ಬಿಯಾಸ್ ನದಿಗಳ ನೀರಿನ ಮೇಲೆ ಭಾರತಕ್ಕೆ ವಿಶೇಷ ಹಕ್ಕಿದೆ. ಇಂಡಸ್,ಜೀಲಂ,ಚೀನಾಬ್ ನದಿಗಳ ನೀರಿನ ಮೇಲೆ ಪಾಕಿಸ್ತಾನಕ್ಕೆ ಹಕ್ಕಿದೆ.* ಈ ಒಪ್ಪಂದದ ಅನುಸಾರ ಭಾರತವು ರಾವಿ ನದಿ ನೀರಿನ ಪೂರ್ಣ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ರಾವಿ ನದಿಯ ನೀರು ಹಳೆಯ ಲಖಾನ್‌ಪು‌ರ್ ಆಣೆಕಟ್ಟಿನ ಮೂಲಕ ಪಾಕಿಸ್ತಾನ ಅಭಿಮುಖವಾಗಿ ಹರಿದು ಹೋಗುತ್ತಿತ್ತು.* ಶಾಹಪುರ್- ಕಂಡಿ  ಬ್ಯಾರೇಜ್ ನಿರ್ಮಾಣ ಪೂರ್ಣಗೊಂಡಿರುವುದರಿಂದ ನೀರಾವರಿ ಜೊತೆಗೆ 206 ಮೆಗಾವಾಟ್ ವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ. ಹಾಗೂ ಉತ್ಪಾದನೆಯಾಗುವ ವಿದ್ಯುತ್ ನ ಹೆಚ್ಚಿನ ಅನುಕೂಲ ಪಂಜಾಬ್ ಗೆ ಸಿಗಲಿದೆ ಎಂದು ವರದಿಯು ತಿಳಿಸಿದೆ.