* ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.* 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.* 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್ಇಆರ್ ಟಿ ನಿರ್ದೇಶಕಿ ವಿ. ಸುಮಂಗಲಾ ಅವರು ತಿಳಿಸಿದ್ದಾರೆ.