* ನಾಡಹಬ್ಬ ದಸರಾ ಮಹೋತ್ಸವದಲ್ಲಿ ಖ್ಯಾತ ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ 2024-25ರ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪ್ರಕಟಿಸಿದ್ದು ಇಂದು (ಅಕ್ಟೋಬರ್ 3) ನಡೆಯುವ ದಸರಾ ಮಹೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.* ಪ್ರಶಸ್ತಿಯು ₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅರಮನೆ ಮುಂಭಾಗ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ.* ಈ ಬಾರಿ 508 ಕಲಾತಂಡಗಳ 6,500 ಕಲಾವಿದರಿಗೆ ವಿವಿಧ ವೇದಿಕೆಗಳಲ್ಲಿ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.* ಪಂಡಿತ್ ಬಸವರಾಜ್ ಭಜಂತ್ರಿ ಅವರು ಹಾವೇರಿ ಜಿಲ್ಲೆಯವರಾಗಿದ್ದು, ಬಾಲ್ಯದಿಂದ ಶಹನಾಯಿ ನುಡಿಸುತ್ತ ಬಂದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಿ ಅವರು ತಿಳಿಸಿದ್ದಾರೆ.