ರಾಜ್ಯ ಶಿಕ್ಷಣ ಇಲಾಖೆಯು ಎಲ್ಲ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಳಗೊಳಿಸುವ ಕ್ರಮಕೈಗೊಂಡಿದ್ದು, ಈ ಶೈಕ್ಷಣಿಕ ವರ್ಷದಿಂದಲೇ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.* ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 5, 8, 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅದೇ ರೀತಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಪರೀಕ್ಷೆ ನಡೆಸಲಾಗುವುದು.* 9ನೇ ತರಗತಿ ವಿದ್ಯಾರ್ಥಿಗಳಿಗೂ ಸಂಕಲನಾತ್ಮಕ ಮೌಲ್ಯಮಾಪನ- 2 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2023-24) ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.* 9ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುವಂತಿಲ್ಲ. ಸಂಕಲನಾತ್ಮಕ ಮೌಲ್ಯಮಾಪನ 2 ನಡೆಸಲಾಗುವುದು. 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪೂರಕ ಪರೀಕ್ಷೆ ಇರಲಿದೆ ಎಂದು ತಿಳಿಸಲಾಗಿದೆ.