* ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 51 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.* ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ 30 ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ವಿಶ್ಲೇಷಿಸಿ ವರದಿ ಬಿಡುಗಡೆ ಮಾಡಿದೆ. ಒಟ್ಟಾರೆ 30 ಸಿಎಂಗಳ ಸರಾಸರಿ ಆಸ್ತಿ 54.42 ಕೋಟಿ ರೂ. ಆಗಿದೆ.* ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು 931 ಕೋಟಿ ರೂ. ಆಸ್ತಿ ಹೊಂದಿ ಮೊದಲ ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು 332 ಕೋಟಿ ರೂ. ಆಸ್ತಿ ಹೊಂದಿ ಎರಡನೇ ಸ್ಥಾನದಲ್ಲಿದ್ದಾರೆ.* ಕೇರಳ ಸಿಎಂ ಪಿಣರಾಯಿ ವಿಜಯನ್ (1.18 ಕೋಟಿ ರೂ.), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ (55.24 ಲಕ್ಷ ರೂ.), ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (15.38 ಲಕ್ಷ ರೂ.) ದೇಶದ ಅತಿ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.