* ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪುರಸ್ಕಾರ ಕಾರ್ಯಕ್ರಮ ಸೆಪ್ಟೆಂಬರ್ 18ರಂದು ಚಾವುಂಡರಾಯ ಸಭಾಂಗಣದಲ್ಲಿ ಬೆಳಿಗ್ಗೆ 11.30ಕ್ಕೆ ಜರುಗಲಿದೆ. * ಈ 2024ರ ಪ್ರಶಸ್ತಿಯನ್ನು ಜನಪದ ಗಾಯಕ ಎಚ್. ಜನಾರ್ಧನ (ಜನ್ನಿ) ಮತ್ತು 2025ರ ಪ್ರಶಸ್ತಿಯನ್ನು ಶೂದ್ರ ಶ್ರೀನಿವಾಸ್ ಅವರಿಗೆ ನೀಡಲಾಗುತ್ತಿದೆ.* ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮೀಜಿ ಉದ್ಘಾಟಿಸಲಿದ್ದು, ಶಾಸಕ ಸಿ.ಎನ್. ಬಾಲಕೃಷ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.* ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.* ಎಚ್. ಜನಾರ್ಧನ (ಜನ್ನಿ) ಅವರು ನಾಲ್ಕೂವರೆ ದಶಕಗಳಿಂದ ರಂಗಭೂಮಿ, ಬೀದಿ ನಾಟಕ, ಕಾವ್ಯರಂಗದಲ್ಲಿ ಸಕ್ರಿಯರಾಗಿರುವ ಜನಾರ್ಧನ ಅವರು ಸಿದ್ದಲಿಂಗಯ್ಯ ಅವರ ಕವಿತೆಗಳನ್ನು ಗಾಯನದ ಮೂಲಕ ಜನಮನಕ್ಕೆ ತಲುಪಿಸಿದ ಸಾಧನೆಯ ಆಧಾರದಲ್ಲಿ ಪುರಸ್ಕಾರಕ್ಕೆ ಆಯ್ಕೆಯಾದರು.* ಶೂದ್ರ ಶ್ರೀನಿವಾಸ್ ಅವರು ಶೂದ್ರ, ಸಲ್ಲಾಪ, ನೆಲದ ಮಾತು ಪತ್ರಿಕೆಗಳ ಮೂಲಕ ಸಾಮಾಜಿಕ ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವ ಬೀರಿದ ಅವರು, ಬೋಧಿವೃಕ್ಷ ಸಂಸ್ಥೆ ಮೂಲಕ ಮಾನವ ಸಂಬಂಧಗಳ ವೃದ್ಧಿಗಾಗಿ ಶ್ರಮಿಸಿದ್ದಾರೆ.* ಲಂಕೇಶ್ ಪತ್ರಿಕೆಯ ಅಂಕಣಕಾರರೂ ಆಗಿರುವ ಅವರು, ಸಿದ್ದಲಿಂಗಯ್ಯ ಅವರ ಪ್ರಮುಖ ಕೃತಿಗಳನ್ನು ಪ್ರಕಟಿಸಿರುವುದರಿಂದ ಪುರಸ್ಕಾರಕ್ಕೆ ಆಯ್ಕೆಯಾದರು.