* ಸಿಬ್ಬಂದಿ ನೇಮಕಾತಿ ಆಯೋಗವು (SSC) ಭವಿಷ್ಯದಲ್ಲಿ 22 ಭಾರತೀಯ ಭಾಷೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಅಕ್ಟೋಬರ್ 1 ರಂದು ತಿಳಿಸಿದ್ದಾರೆ.* 'ಭಾರತೀಯ ಭಾಷಾ ಉತ್ಸವ: ತಂತ್ರಜ್ಞಾನ ಮತ್ತು ಭಾರತೀಯ ಭಾಷಾ ಶೃಂಗಸಭೆ'ಯ ಸಮಾರೋಪ ಸಮಾರಂಭದಲ್ಲಿ ಮಹತ್ವಾಕಾಂಕ್ಷಿ ಅಭ್ಯರ್ಥಿಗಳಿಗೆ ಮಾತೃ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.* ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯ ಮೇರೆಗೆ ಈ ವರ್ಷದಿಂದ ಎಸ್‌ಎಸ್‌ಸಿ ಪರೀಕ್ಷೆಗಳನ್ನು 11 ಪ್ರಾದೇಶಿಕ ಭಾಷೆಗಳು ಮತ್ತು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಿಂಗ್ ಅವರು ತಿಳಿಸಿದ್ದಾರೆ.* ಹಿಂದಿ, ತಮಿಳು, ತೆಲುಗು, ಮಲಯಾಳಂ, ಗುಜರಾತಿ ಹಾಗೂ ಬೆಂಗಾಲಿ ಎಂಬ ಏಳು ಪ್ರಾದೇಶಿಕ ಭಾಷೆಗಳಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣವನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.* ಬಂಗಾಳಿ, ಹಿಂದಿ, ಗುಜರಾತಿ, ಕನ್ನಡ, ಮರಾಠಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡಲು ಯೋಜಿಸಲಾಗಿದೆ. * "ಎನ್ಇಪಿ -2020 ಭಾರತದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಹೊಸ ವೃತ್ತಿ ಮತ್ತು ಉದ್ಯಮಶೀಲತೆಯ ಅವಕಾಶಗಳನ್ನು ತೆರೆಯುವ ಭರವಸೆಯೊಂದಿಗೆ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯನ್ನು ಪೂರೈಸುತ್ತದೆ" ಎಂದು ಸಚಿವರು ತಿಳಿಸಿದರು.