* ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.* ಐದು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಪ್ರವೀಣ್ ಮಧುಕರ್ ಅವರು 2003 ನೇ ಬ್ಯಾಚ್ ನ ಐಪಿಎಸ್‌ ಅಧಿಕಾರಿಯಾಗಿದ್ದರು.* ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಈ ವರ್ಷದ ಮೇ ತಿಂಗಳಿನಲ್ಲಿ ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ನೇಮಕವಾಗಿದ್ದರು.* ನಿಯಮಗಳ ಪ್ರಕಾರ, ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ನೇಮಕಾತಿಯ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸಬಹುದು.