* ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ರನ್ನಾಗಿ ಕರ್ನಾಟಕ ಕೇಡರ್‌ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.* ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯಲ್ಲಿ (ಶನಿವಾರ)ರಂದು ಪ್ರವೀಣ್ ಸೂದ್ ರವರ ಹೆಸರನ್ನು ಅಂತಿಮಗೊಲಿಸಲಾಗಿದೆ.