* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 17 ರಂದು (ಸೋಮವಾರ) 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸುವುದಾಗಿ ತಿಳಿಸಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸಲಿರುವ 16ನೇ ಬಜೆಟ್ ಆಗಿದೆ.
* ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸಲಾಗಿತ್ತದೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
* "ಅದರ ನಂತರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದ್ದು, ಮಾರ್ಚ್ ಅಂತ್ಯದಲ್ಲಿ ಅದಕ್ಕೆ ನಾನು ಉತ್ತರಿಸುತ್ತೇನೆ. ಅಧಿವೇಶನವನ್ನು ಎಷ್ಟು ಸಮಯ ನಡೆಸಬೇಕು (ಕೊನೆಯ ದಿನಾಂಕ) ಎಂಬುದನ್ನು ವ್ಯವಹಾರ ಸಲಹಾ ಸಮಿತಿ ನಿರ್ಧರಿಸುತ್ತದೆ" ಎಂದು ಸಿಎಂ ಹೇಳಿದರು.
* ಬಜೆಟ್ ಮಂಡಿಸುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ನಿಯಂತ್ರಣ ಕೇಂದ್ರ ಮತ್ತು ರಾಜ್ಯ ಸರಕಾರ ಎರಡೂ ಮಾಡಬೇಕು. ರಾಜ್ಯ ಸರಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೋ ಅದನ್ನೆಲ್ಲ ಮಾಡುತ್ತೇವೆ.
ಮಂಗಳವಾರ, 18 ಫೆಬ್ರುವರಿ 2025
10:58 ಪೂರ್ವಾಹ್ನ
Daily PDF
ಸಿಎಂ ಸಿದ್ದರಾಮಯ್ಯ : ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ
Authored by:
Siddaram Halli