* ಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಸೆ.15  ಶುಕ್ರವಾರ ದಿನದಂದು ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.* ಇಸ್ತಾನದಲ್ಲಿ ಭಾರತ ಮೂಲಕ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಥರ್ಮನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.* ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಷಣ್ಮುಗರತ್ನಂ ಅವರು, ಚೀನಾ ಮೂಲದ ಇಬ್ಬರು ಪ್ರತಿಸ್ಪರ್ಧಿಗಳನ್ನು ಸೋಲಿಸಿ, ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.* ಷಣ್ಮುಗರತ್ನಂ ಅವರು ಶೇ. 70.4 ರಷ್ಟು ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿಗಳಾದ ಎನ್‌ಜಿ ಕೊಕ್ ಸಾಂಗ್ ಮತ್ತು ತಾನ್ ಕಿನ್ ಲಿಯಾನ್ ಅವರು ಕ್ರಮವಾಗಿ ಶೇಕಡಾ 15.7 ಮತ್ತು 13.88 ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.