* ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ ಐದು ತಿಂಗಳ ನಂತರ ನೇಪಾಳದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದ್ದು ನೇಪಾಳದ ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ಮೊದಲ ದಕ್ಷಿಣ ಏಷ್ಯಾದ ದೇಶವಾಗಿದೆ.* ಲೈಂಗಿಕ ಅಲ್ಪಸಂಖ್ಯಾತರಾದ 'ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಹಾಗೂ ಸುರೇಂದ್ರ ಪಾಂಡೆ (27) ಕಾನೂನುಬದ್ದವಾಗಿ ವಿವಾಹವಾದರು. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ' ಎಂದು ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷರಾದ ಸಂಜಿಬ್ ಗುರುಂಗ್ ಅವರು (ಪಿಂಕಿ) ತಿಳಿಸಿದ್ದಾರೆ.* 'ಬ್ಲೂ ಡೈಮಂಡ್" ಎಂದರೆ ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ.* 2007ರಲ್ಲಿ ನೇಪಾಳ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು. 2015ರಲ್ಲಿ ಅಂಗೀಕರಿಸಲ್ಪಟ್ಟ ಕಾಯಿದೆ ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡುವಂತಿಲ್ಲ ಎಂದು ತಿಳಿಸುತ್ತದೆ.* 2023ರ ಜೂನ್ 27ರಂದು ಗುರುಂಗ್ ಸೇರಿದಂತೆ ಅನೇಕ ಜನರು ಸಲ್ಲಿಸಿದ ರಿಟ್ ಅರ್ಜಿಯಲ್ಲಿ ನೇಪಾಳದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿತು.