* ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.* ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ 13 ಇನ್ನಿಂಗ್ಸ್ಗಳನ್ನು ಆಡಿದ್ದ ಮಂಧಾನ ಅವರ ನಾಲ್ಕು ಭರ್ಜರಿ ಶತಕಗಳ ಸಹಿತ ಬರೋಬ್ಬರಿ 747 ರನ್ ಕಲೆಹಾಕಿದ್ದರು. * ಈ ಮೂಲಕ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ.* ಉಳಿದಂತೆ ಲಾರಾ ವೊಲ್ವಾರ್ಡ್ (697), ಟ್ಯಾಮಿ ಬ್ಯೂಮಾಂಟ್ (554) ಮತ್ತು ಹೇಲಿ ಮ್ಯಾಥ್ಯೂಸ್ (469) ರನ್ ಗಳಿಸಿದ್ದಾರೆ.* ಮಂಧಾನ 57.86ರ ಸರಾಸರಿಯಲ್ಲಿ 95.15 ರ ಸ್ಟ್ರೈಕ್ ರೇಟ್ನಲ್ಲಿ ರನ್ ಗಳಿಸಿದ್ದಾರೆ. ಅವರು ಈ ವರ್ಷದಲ್ಲಿ ನಾಲ್ಕು ಶತಕ ಗಳಿಸುವ ಮೂಲಕ ಮಹಿಳಾ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಮಾಡಿದ್ದಾರೆ. 95 ಬೌಂಡರಿ ಹಾಗೂ ಆರು ಸಿಕ್ಸರ್ ಹೊಡೆದಿದ್ದಾರೆ.* 2024ರಲ್ಲಿನ ಅದ್ಬುತ ಪ್ರದರ್ಶನವು ಐಸಿಸಿ ಮಹಿಳಾ ಚಾಂಪಿಯನ್ ಶಿಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಸ್ಥಾನವನ್ನು ಭದ್ರಪಡಿಸಿದೆ.