* ಕರ್ನಾಟಕ ಸಂಘವು ಇದೇ ಮೊದಲ ಬಾರಿಗೆ ಸ್ಥಾಪಿಸಿರುವ 'ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಯ್ಕೆಮಾಡಲಾಗಿದೆ. * ಈ ಪ್ರಶಸ್ತಿಯು ₹1 ಲಕ್ಷ ನಗದು ಬಹುಮಾನ ಹಾಗೂ ಫಲಕವನ್ನು ಹೊಂದಿದೆ. 'ನಗರದಲ್ಲಿ ರೈತ ಸಭಾಂಗಣದಲ್ಲಿ ಜೂನ್ 30ರಂದು ನಡೆದ ಸಮಾರಂಭದಲ್ಲಿಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. * ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿಯ ಪುರುಷೋತ್ತಮಾ ನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶ ಅವರು ಜೂನ್ 25 ರಂದು ತಿಳಿಸಿದರು.* 'ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದು ಮಂಡ್ಯ ಶಾಸಕ ರವಿಕುಮಾರಗೌಡ ಅವರ ಅಧ್ಯಕ್ಷತೆ ವಹಿಸಲಿದ್ದಾರೆ ಸಿ.ಎಸ್. ಪುಟ್ಟರಾಜು ನಾಲ್ವಡಿ ಭಾವಚಿತ್ರ ಆನಾವರಣ ಮಾಡಲಿದ್ದಾರೆ.