* ದೇಶದ ಅತೀ ದೊಡ್ಡ 17 ಮೃಗಾಲಯಗಳ ಪೈಕಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನ ಪ್ರಾಣಿಗಳ ಸಂತಾನಾಭಿವೃದ್ಧಿಯಲ್ಲಿ ದೇಶದಲ್ಲೇ ನಂಬರ್ 1 ಎಂಬ ಗೌರವಕ್ಕೆ ಪಾತ್ರವಾಗಿದೆ. ಅದರಲ್ಲೂ ದೇಶದಲ್ಲಿ ಅಪರೂಪದ ಹುಲಿ, ಕಾಡು, ಶ್ವಾನ, ಕಾಳಿಂಗ, ರಿಯಾ ಜಾತಿಯ ಹಕ್ಕಿಯ ಸಂತಾನಾಭಿವೃದ್ಧಿಯಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದೆ.* ನಮ್ಮ ದೇಶದಲ್ಲಿ 164 ಮಾನ್ಯತೆ ಪಡೆದ ಮೃಗಾಲಯವಿದ್ದು, ಅದರಲ್ಲಿ ಒಟ್ಟು ಅತಿ ದೊಡ್ಡ 17 ಮೃಗಾಲಯಗಳು ಇದೆ. ಅದರಲ್ಲಿ ಮಂಗಳೂರಿನ ಪಿಲಿಕುಳ ಕೂಡ ಒಂದಾಗಿದೆ* ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಡಿ ಪಿಲಿಕುಳ ಮೃಗಾಲಯ ಬರುತ್ತದೆ. ಈ ಉದ್ಯಾನ 150 ಎಕರೆ ವ್ಯಾಪ್ತಿಯನ್ನು ಹೊಂದಿದೆ. * ಕಾಳಿಂಗ ಸರ್ಪದ ಸಂತಾನೋತ್ಪತ್ತಿ  ಮಂಗಳೂರಿನ ಪಿಲಿಕುಳದಲ್ಲಿ ಮಾತ್ರ ಆಗುತ್ತಿದೆ. ಕಾಳಿಂಗ ಸರ್ಪದ ವೈಜ್ಞಾನಿಕವಾಗಿ ಸಂತಾನೋತ್ಪತ್ತಿ ಮಾಡುತ್ತಿದ್ದು, ಈಗಾಗಲೇ 180 ಮರಿಗಳಾಗಿದೆ. ಹೆಚ್ಚುವರಿ ಕಾಳಿಂಗ ಮರಿಗಳನ್ನು ಕಾಡಿಗೆ ಬಿಡಲಾಗಿದೆ. ಈ ಸಂತಾನಾಭಿವೃದ್ಧಿ ಹೆಚ್ಚಲು ಪಿಲಿಕುಳದಲ್ಲಿರುವ ವಾತಾವರಣದ, ಆರೈಕೆಯು ಬಹಳ ಮುಖ್ಯವಾಗಿದೆ.