* ಕರ್ನಾಟಕ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಕಡ್ಡಾಯವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ವಾಚನ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. * ಶಿಕ್ಷಣ ಸಂಸ್ಥೆಗಳಲ್ಲಿ ಬೆಳಗ್ಗಿನ ಪ್ರಾರ್ಥನೆ ಸಮಯದಲ್ಲಿ ಪ್ರಸ್ತಾವನೆ ಓದುವ ಮೂಲಕ ಪ್ರತಿನಿತ್ಯದ ದಿನಚರಿಯಲ್ಲಿ ಸಂವಿಧಾನದ ತತ್ವಗಳನ್ನು ಅಳವಡಿಸಿಕೊಳ್ಳುವ ಪ್ರಮಾಣ ಮಾಡಬೇಕೆಂದು ತಿಳಿಸಿದೆ. * ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ, ಸೆಪ್ಟೆಂಬರ್ 15 ರಂದು ಸಮಾಜ ಕಲ್ಯಾಣ ಇಲಾಖೆಯು ವಿಧಾನಸೌಧದ ಮುಂಭಾಗ ಸಂವಿಧಾನದ ಪ್ರಸ್ತಾವನೆ ವಾಚನ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು.* ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟ ಸದಸ್ಯರು ಹಾಗೂ ಲಕ್ಷಾಂತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂವಿಧಾನದ ಪ್ರಸ್ತಾವನೆ ವಾಚನ ಮಾಡಿದ್ದರು.* ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ 2.27 ಕೋಟಿ ಜನರು ನೊಂದಣಿ ಮಾಡಿಕೊಂಡಿದ್ದು, ರಾಜ್ಯದ ಪಂಚಾಯ್ತಿ ವ್ಯಾಪ್ತಿಯಿಂದ ಸಚಿವಾಲಯದವರೆಗಿನ ಎಲ್ಲ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದು ನಡೆಯಲಿದೆ.