* ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ ಮೂರು ದಿನ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್ ನಲ್ಲಿ ಫೆಬ್ರುವರಿ 22 ರಂದು (ಗುರುವಾರ) ಚಾಲನೆ ನೀಡಿದ್ದಾರೆ.* ಈ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳಲ್ಲಿ ರಕ್ತ ಹೀನತೆ ಕೊರತೆ ನೀಗಿಸಲು, ಮಕ್ಕಳ ಮಾನಸಿಕ ಮತ್ತು ದೈಹಿಕ ಅರೋಗ್ಯ ವೃದ್ಧಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.* ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೆಎಂಎಫ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗಾಗಿ  ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.* 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ  ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆವು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.    * ಕರ್ನಾಟಕ ರಾಜ್ಯದ 55 ಲಕ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಮೂರು ಜಿಲ್ಲೆಗಳಲ್ಲಿ ರಾಗಿ ಮಾಲ್ಟ್ ಅನ್ನು ಸರ್ಕಾರ ವಿತರಣೆ ಮಾಡಿದೆ.