* ರೈತರಿಗೆ ಕೃಷಿಯ ಬಗ್ಗೆ ವೈಜ್ಞಾನಿಕ ಅರಿವು ಮೂಡಿಸಲು ಸರ್ಕಾರವು "ಕಿಸಾನ್ ಕಿ ಬಾತ್" ಎಂಬ ಮಾಸಿಕ ರೇಡಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.* ರೈತರೊಂದಿಗೆ ಸಂಪರ್ಕ ಸಾಧಿಸುವ ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಆಧುನಿಕ ಕೃಷಿ ಪದ್ಧತಿ ಬಗ್ಗೆ ಅರಿವು ಮೂಡಿಸುವ ಉದ್ದೇಶವಾಗಿದೆ. ವೈಜ್ಞಾನಿಕ ಮಾಹಿತಿ ಮೂಲಕ ರೈತರನ್ನು ಆರ್ಥಿಕ ಸಬರನ್ನಗಿಸುವ ಪ್ರಯತ್ನದಲ್ಲಿ "ಕಿಸಾನ್ ಕಿ ಬಾತ್" ಮಾಸಿಕ ರೇಡಿಯೊ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ.* ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ "ಮನ್ ಕಿ ಬಾತ್" ನಿಂದ ಪ್ರೇರಿತವಾಗಿರುವ ಈ ಕಾರ್ಯಕ್ರಮವು ರೈತರಿಗೆ ಸಚಿವರು, ಕೃಷಿ ವಿಜ್ಞಾನಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ತೊಡಗಿಸಿಕೊಳ್ಳಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಕೃಷಿ ಪದ್ಧತಿಯಲ್ಲಿ ಅನುಸರಿಸಬೇಕಿರುವ ವಿಧಾನಗಳು ಮತ್ತು ವೈಜ್ಞಾನಿಕ ಪ್ರಗತಿ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.* ದೇಶದ ಕೃಷಿ ವಲಯದ ಪುನಶ್ಚತನಕ್ಕೆ ಒತ್ತು ನೀಡುವುದು ಈ ರೇಡಿಯೊ ಕಾರ್ಯಕ್ರಮ ಉದ್ದೇಶವಾಗಿದೆ. ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರಗಳನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.* ಕಾರ್ಯಕ್ರಮದ ಸಮಯದಲ್ಲಿ ಉತ್ತಮ ಅಭ್ಯಾಸಗಳು ಹೊಸ ತಂತ್ರಜ್ಞಾನಗಳು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ನವೀನ ವಿಧಾನಗಳು ಸೇರಿದಂತೆ ಕೃಷಿಯ ವಿವಿಧ ಅಂಶಗಳನ್ನು ನಾವು ಚರ್ಚಿಸುತ್ತೇವೆ ಎಂದು ಚೌಹಾಣ್ ಆಗಸ್ಟ್ 15ರಂದು ನಡೆದ ಸಮಾರಂಭದಲ್ಲಿ ಹೇಳಿದರು.* ಕಾರ್ಯಕ್ರಮವು ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ ಬಹುಶಃ ಪ್ರಧಾನಿಯವರ ರೇಡಿಯೊ ಕಾರ್ಯಕ್ರಮಕ್ಕಿಂತ ಒಂದು ವಾರ ಮುಂಚಿತವಾಗಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.