* 2024-25 ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ, ಆದರೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.* ಕೇಂದ್ರ ಸರ್ಕಾರದ ಜಿಎಸ್ಟಿ ಸಂಗ್ರಹವು ತಿಂಗಳಿನಿಂದ ತಿಂಗಳಿಗೆ ಹೆಚ್ಚುತ್ತಿದೆ. ಪ್ರತಿ ತಿಂಗಳು ಸರಕು ಮತ್ತು ಸೇವಾ ತೆರಿಗೆಯಲ್ಲಿ (GST) ಭಾರಿ ಹೆಚ್ಚಳವಾಗಿದೆ. ಜೊತೆಗೆ ಸರ್ಕಾರಕ್ಕೆ ದೊಡ್ಡ ಆದಾಯವನ್ನು ತರುತ್ತದೆ. ಅಲ್ಲದೆ ದೇಶದ ವಿವಿಧ ರಾಜ್ಯಗಳಿಗೆ ಉತ್ತಮ ಆದಾಯ ಬರುತ್ತಿದೆ.* ಸೆಪ್ಟೆಂಬರ್ ತಿಂಗಳ ಜಿಎಸ್ಟಿ ಸಂಗ್ರಹ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಹಣಕಾಸು ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಒಟ್ಟು 1,62,712 ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ.* ಈ ಹಣಕಾಸು ವರ್ಷ (2023-24) ಏಪ್ರಿಲ್ ತಿಂಗಳಿನಿಂದ ಸರಕು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು 1.60 ಲಕ್ಷ ಕೋಟಿಯನ್ನು ದಾಟಿರುವುದು ಇದು ನಾಲ್ಕನೇ ಬಾರಿ ಎಂದು ವರದಿಯಿಂದ ತಿಳಿದುಬಂದಿದೆ. * ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಜಿಎಸ್ಟಿ ಸಂಗ್ರಹವು 1.6 ಲಕ್ಷ ಕೋಟಿಯ ಗಡಿ ದಾಟಿದೆ. ಈ ಆರು ತಿಂಗಳಲ್ಲಿ ಒಟ್ಟು ತೆರಿಗೆ ಸಂಗ್ರಹ 9,92,508 ಕೋಟಿ ರೂಪಾಯಿ ಆಗಿದೆ.