* ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಾಗೂ ಭಾರತೀಯ ನೌಕಾಪಡೆ ಸ್ಥಳೀಯವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ಬಹು-ಪ್ರಭಾವದ ನೆಲದ ಗಣಿಯನ್ನು (MIGM) ಯಶಸ್ವಿಯಾಗಿ ಪರೀಕ್ಷಿಸಿವೆ ಎಂದು ರಕ್ಷಣಾ ಸಚಿವರ ಕಚೇರಿ ಮೇ 5ರಂದು ತಿಳಿಸಿದೆ.* ಈ ಗಣಿಯು ಸಮುದ್ರದೊಳಗಿನ ಯುದ್ಧದ ಸಂದರ್ಭದಲ್ಲಿ ಪ್ರಮುಖ ಶಕ್ತಿಯಾಗಲಿದೆ.* ಈ ಬೆಳವಣಿಗೆ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಬಲಿಯಾಗಿದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲೇ ನಡೆದಿದೆ. ಬಲಿಯಾದವರಲ್ಲಿ ಹೆಚ್ಚಿನವರು ಪ್ರವಾಸಿಗರಿದ್ದರು.* MIGM ಅನ್ನು, ಆಧುನಿಕ ರಹಸ್ಯ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳ ವಿರುದ್ಧ ಭಾರತೀಯ ನೌಕಾಪಡೆಯ ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.* ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಸಾಧನೆಗಾಗಿ DRDO, ನೌಕಾಪಡೆ ಹಾಗೂ ಕೈಗಾರಿಕೆಗಳನ್ನು ಶ್ಲಾಘಿಸಿದ್ದಾರೆ. ಈ ಗಣಿಯು ಭಾರತೀಯ ನೌಕಾಪಡೆಯ ಸಾಗರದೊಳಗಿನ ಕಾರ್ಯಾಚರಣೆ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.