* 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು, ಸತತ ಮೂರನೇ ಅವಧಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧಿಕಾರಕ್ಕೆ ಬಂದಿದ್ದು, ಎರಡನೇ ಅವಧಿಗೆ ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು(ಅಕ್ಟೋಬರ್ 17) ಪ್ರಮಾಣ ವಚನ ಸ್ವೀಕರಿಸಿದರು.* ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.* ಸೈನಿ ಅವರೊಂದಿಗೆ ಅಂಬಾಲಾ ಕ್ಯಾಂಟ್ ಶಾಸಕ ಅನಿಲ್ ವಿಜ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಾದಶಹಪುರ ಶಾಸಕ ರಾವ್ ನರಬೀರ್ ಸಿಂಗ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.* ನಯಾಬ್ ಸೈನಿ ಈ ಹಿಂದೆ OBC ಸಂಸದರಾಗಿ ಸೇವೆ ಸಲ್ಲಿಸಿದರು ಮತ್ತು 1996 ರಿಂದ ಹರಿಯಾಣದ ಬಿಜೆಪಿ ಘಟಕದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ಮತ್ತು ಸರ್ಕಾರವನ್ನು ರಚಿಸಲು ಹಕ್ಕು ಸಾಧಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು.* ಸೈನಿ ಅವರ ನಾಯಕತ್ವವು ಬಿಜೆಪಿ ನಿರ್ಗಮನ ಸಮೀಕ್ಷೆಗಳನ್ನು ಧಿಕ್ಕರಿಸಿ ಐತಿಹಾಸಿಕ ಮೂರನೇ ಅವಧಿಯನ್ನು ಸಾಧಿಸಿದ್ದಾರೆ.* ಸೈನಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದರು ಮತ್ತು ಪಂಚಕುಲದ ಗುರುದ್ವಾರ ಹಾಗೂ ಮಾನಸಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.* ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಹದಿಮೂರು ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.