* ಭಾರತದ ವೇಗಿ ಮೊಹಮ್ಮದ್ ಶಮಿ ದುಬೈನಲ್ಲಿ ನಡೆದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಕಡಿಮೆ ಎಸೆತಗಳಲ್ಲಿ 200 ಏಕದಿನ ವಿಕೆಟ್ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ್ದಾರೆ.* ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಮೊದಲ ಓವರ್ನಲ್ಲೇ ವಿಕೆಟ್ ಪಡೆದ ಶಮಿ, ಒಟ್ಟು 5 ವಿಕೆಟ್ ಕಬಳಿಸುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ 200 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಅವರು ಕೇವಲ 5126 ಎಸೆತಗಳಲ್ಲಿ ಮಾಡಿದ್ದಾರೆ.* ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಹೆಸರಿನಲ್ಲಿತ್ತು. ಸ್ಟಾರ್ಕ್ 873.3 ಓವರುಗಳಲ್ಲಿ, ಅಂದರೆ 5240 ಎಸೆತಗಳಲ್ಲಿ 200 ವಿಕೆಟ್ಗಳನ್ನು ಪೂರೈಸಿ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 200 ವಿಕೆಟ್ಗಳ ಮೈಲುಗಲ್ಲು ಮುಟ್ಟಿದ ಬೌಲರ್ ಎನಿಸಿಕೊಂಡಿದ್ದರು.* ಐಸಿಸಿ ಟೂರ್ನಿಯಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಈವರೆಗೆ 19 ಪಂದ್ಯಗಳನ್ನಾಡಿರುವ ಶಮಿ ಒಟ್ಟು 60 ವಿಕೆಟ್ ಪಡೆದು ಈ ಸಾಧನೆ ಮಾಡಿದ್ದಾರೆ.