* ಸಿಂದಗಿ ಸಾರಂಗ ಮಠ ಕೊಡಮಾಡುವ ಭಾಸ್ಕರಾಚಾರ್ಯ ಪ್ರಶಸ್ತಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ ನಿರ್ದೇಶಕರು ಸುಬ್ಬಯ್ಯ ಅಯ್ಯಪ್ಪನ್‌ ಆಯ್ಕೆಯಾಗಿದ್ದಾರೆ. * ವಿಜಯಪುರ ಜಿಲ್ಲೆಯ ಸಿಂದಗಿಯ ಸಾರಂಗಮಠ ಪ್ರತಿ ವರ್ಷ ನೀಡುವ ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ ಅವರ ಹೆಸರಿನ ಮೇಲೆ ಕೊಡ ಮಾಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಈ ಬಾರಿ ಅಂತರಾಷ್ಟ್ರೀಯ ಖ್ಯಾತ ಕೃಷಿ ತಜ್ಞ ಡಾ. ಎಸ್. ಅಯ್ಯಪ್ಪನ್ ಅವರಿಗೆ ಲಭಿಸಿದೆ.* ಈ ಹಿಂದೆ ದೇಶದ ಖ್ಯಾತ ವಿಜ್ಞಾನಿಗಳಾದ ಸಿ.ಎನ್.ರಾವ್, ಯು.ಆರ್.ರಾವ್, ಡಾ. ಎ.ಎಸ್.ಪಾಟೀಲ, ಕೆ.ಕಸ್ತೂರಿರಂಗನ, ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣಕುಮಾರ ಅವರಿಗೆ ನೀಡಿ ಗೌರವಿಸಿದೆ.* ಮೈಸೂರು ಮೂಲದ ಪದ್ಮಶ್ರೀ ಪುರಸ್ಕೃತ ಸುಬ್ಬಯ್ಯ ಅಯ್ಯಪ್ಪನ್‌ ಅವರು 45ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮೀನುಗಾರಿಕೆ ಮತ್ತು ಕೃಷಿ ತಂತ್ರಜ್ಞಾನದ ಕುರಿತು ಅಧ್ಯಯನ ಮಾಡಿದ್ದಾರೆ ಭಾರತ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.* ಸಿದ್ಧಾಂತ ಶಿಖಾಮಣಿ ಕರ್ತೃ ಸಾಲೋಟಗಿ ಶಿವಯೋಗಿ ಶಿವಾಚಾರ್ಯರ ಸ್ಮರಣೆಯಲ್ಲಿ ನೀಡುವ ಶಿವಯೋಗಿ ಶಿವಾಚಾರ್ಯ ಪ್ರಶಸ್ತಿಯನ್ನು ಮಡಕೇರಿಯ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಿ.ಶಿವಕುಮಾರಸ್ವಾಮಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.