Job Description: * ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಫೆ.04 ರಂದು ಅಂಗೀಕಾರ ನೀಡಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಎರಡು ತಿಂಗಳ ಬಳಿಕ ಕೇಂದ್ರ ಸರ್ಕಾರ ಈ ಅನುಮೋದನೆ ದೊರಕಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಸೋಮವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು.* ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಐವರು ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿ ವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಮೂವರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಫೆ.06 ರಂದು ಪ್ರಮಾಣವಚನ ಸ್ವೀಕರಿಸಿದರು.* ಸುಪ್ರೀಂ ಕೋರ್ಟ್‌ನ ನೂತನ ಕಟ್ಟಡದ ಸಭಾಂಗಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ಪ್ರಮಾಣ ವಚನ ಬೋಧಿಸಿದರು.