* ಮಾರ್ಚ್ 6, 2025 ರಂದು ಮಾಡಿದ ಶಿಫಾರಸಿನ ಮೇರೆಗೆ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. * ಸುಪ್ರೀಂ ಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಬಾಗ್ಚಿ ಅವರು 6 ವರ್ಷಗಳಿಗೂ ಹೆಚ್ಚು ಸುದೀರ್ಘ ಅಧಿಕಾರಾವಧಿ ಹೊಂದಿರಲಿದ್ದು ನ್ಯಾಯಮೂರ್ತಿ. ಕೆ.ವಿ. ವಿಶ್ವನಾಥನ್ ಅವರ ನಿವೃತ್ತಿಯ ನಂತರ ಮೇ 2031ರಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಲಿದ್ದಾರೆ.* ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರನ್ನು ಜೂನ್ 27, 2011ರಂದು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. ಜನವರಿ 4, 2021ರಂದು ಆಂಧ್ರಪ್ರದೇಶದ ಹೈಕೋರ್ಟ್‌ಗೆ ವರ್ಗಾವಣೆಗೊಂಡ ಅವರು ನವೆಂಬರ್ 8, 2021ರಂದು ಕಲ್ಕತ್ತಾ ಹೈಕೋರ್ಟ್‌ಗೆ ಮರಳಿ ಅಂದಿನಿಂದ ಈವರೆಗೆ ಅಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. * ಜೊಯಮಲ್ಯ ಬಾಗ್ಚಿ ಅವರು 13 ವರ್ಷಗಳಿಗೂ ಹೆಚ್ಚು ಕಾಲ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.