* ದೇಶದಲ್ಲಿ ಸುಪ್ರೀಂ ಕೋರ್ಟ್‌ ಆರಂಭವಾಗಿ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. * ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಕಾಲೇಜಿನಲ್ಲಿ ನಡೆದ ದ್ರೌಪದಿ ಮುರ್ಮು ಅವರು ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಹೊಸ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಯಿತು.* ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು ಸಂವಿಧಾನವನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ  ಸಂಸದ ಅರ್ಜುನ್ ಮೇಘವಾಲ್, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಉಪಸ್ಥಿತರಿದ್ದರು.* ನಮ್ಮ ನ್ಯಾಯಾಂಗ ವ್ಯವಸ್ಥೆಯ ಮುಂದೆ ಅನೇಕ ಸವಾಲುಗಳಿವೆ. ಅದಕ್ಕಾಗಿ ಎಲ್ಲರೂ ಒಟ್ಟಾಗಿ 2 ಸಂಘಟಿತ ಪ್ರಯತ್ನ ಮಾಡಬೇಕಾಗುತ್ತದೆ. ಉದಾಹರಣೆಗೆ, 2. ಸಾಕ್ಷಿಗಳು ಮತ್ತು ಸಾಕ್ಷಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನ್ಯಾಯಾಗ, ಸರಕಾರ ಮತ್ತು ಪೊಲೀಸರು ಜಂಟಿಯಾಗಿ ಪರಿಹರಿಸಬೇಕು'' ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.