Job Description: * ಖ್ಯಾತ ನ್ಯಾಯಶಾಸ್ತ್ರಜ್ಞ ಹಾಗೂ ಸುಪ್ರೀಂಕೋರ್ಟ್ನ ಹಿರಿಯ ವಕೀಲರಾದ ಫಾಲಿ ಎಸ್ ನಾರಿಮನ್ (95) ಇಹಲೋಕ ತ್ಯಜಿಸಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಫಾಲಿ ನಾರಿಮನ್ ಅವರು ದೆಹಲಿ ನಿವಾಸದಲ್ಲಿ ಇಂದು (ಫೆ.21) ಬೆಳಗ್ಗೆ ನಿಧನರಾಗಿದ್ದಾರೆ.* ಫಾಲಿ ನಾರಿಮನ್ ಜನವರಿ 10, 1929ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದ್ದರು. ಫಾಲಿ ನಾರಿಮನ್ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಮೊದಲು ವಕೀಲರಾಗಿ ಅಭ್ಯಾಸವನ್ನು ಪ್ರಾರಂಭಿಸಿದ್ದರು. * ಎಸ್. ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದು, ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. * ಎಸ್. ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿದ್ದು, 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.* ಫಾಲಿ ನಾರಿಮನ್ ಅವರು 1991ರಿಂದ 2010ರವರೆಗೆ ಭಾರತದ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989–2005ರವರೆಗೆ ಪ್ಯಾರಿಸ್‌ನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮಂಡಳಿಯ ನ್ಯಾಯಾಲಯದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು.