* ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳಿಸೈ ಸೌಂದರರಾಜನ್ ಅವರು ಮಾರ್ಚ್ 18 ರಂದು (ಸೋಮವಾರ) ಏಕಾಏಕಿ ಎರಡೂ ರಾಜ್ಯಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. * ಮೂಲಗಳ ಪ್ರಕಾರ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಕಾರಣಕ್ಕೆ ಅವರು ರಾಜ್ಯಪಾಲ ಹುದ್ದೆಯನ್ನು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. * 62 ವರ್ಷದ ತಮಿಳುಸೈ ಸೌಂದರರಾಜನ್‌ ಅವರನ್ನು 2019ರ ನವೆಂಬರ್‌ನಲ್ಲಿ ತೆಲಂಗಾಣದ ಎರಡನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು. ನಂತರ ಫೆಬ್ರವರಿ 2021ರಲ್ಲಿ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿತ್ತು. * ಇದರ ಜೊತೆಗೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ತಮಿಳಿಸೈ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ.* ತಿರುನಲ್ವೇಲಿ, ಕನ್ಯಾಕುಮಾರಿ ಅಥವಾ ಚೆನ್ನೈ (ದಕ್ಷಿಣ) ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಯಾಗಿ ಸೌಂದರರಾಜನ್ ಅವರು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.