Job Description: * ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಉಪಸ್ಥಿತಿಯಲ್ಲಿ, ಸಹಕಾರ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ನಬಾರ್ಡ್ ಮತ್ತು ಸಿಎಸ್ ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ ನಡುವೆ ತಿಳಿವಳಿಕಾ ಒಡಂಬಡಿಕೆಗೆ ಸಹಿ ಹಾಕಲಾಯಿತು.* ಈ ತಿಳಿವಳಿಕಾ ಒಡಂಬಡಿಕೆಯು ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿಗೆ (ಪಿಎಸಿಎಸ್) ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್ ಸಿ) ನೀಡುವ ಸೇವೆಗಳನ್ನು ಒದಗಿಸಲು ಅನುವು ಮಾಡಿಕೊಡುತ್ತದೆ.* ಇಂದು ಸಹಿ ಹಾಕಲಾದ ಒಪ್ಪಂದದ ಪ್ರಕಾರ, ಪಿಎಸಿಎಸ್ ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಪಿಎಸಿಎಸ್ ನ 13 ಕೋಟಿ ರೈತ ಸದಸ್ಯರು ಸೇರಿದಂತೆ 300 ಕ್ಕೂ ಹೆಚ್ಚು ಸೇವೆಗಳು ಗ್ರಾಮೀಣ ಜನರಿಗೆ ಲಭ್ಯವಾಗಲಿವೆ.