* ಕರ್ನಾಟಕವು ತಲಾದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳೇ ಈ ಸಾಧನೆಗೆ ಕಾರಣವಾಗಿದ್ದು, ಬಡವರಿಗೆ ತಿಂಗಳಿಗೆ 5–6 ಸಾವಿರ ರೂ. ಸಹಾಯ ಆಗುತ್ತಿದೆ ಎಂದರು.* ಹೆಣ್ಣು ಮಕ್ಕಳಿಗೆ ಸ್ವಾವಲಂಬನೆ ನೀಡಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದೂ ವಿವರಿಸಿದರು. ಅವರು ಮಾಜಿ ಸಿಎಂ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಅರಸು ಅವರು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ರಾಜ್ಯದ ನಾಮಕರಣದಲ್ಲಿ ಶ್ರಮಿಸಿದ್ದರು ಎಂದು ಸ್ಮರಿಸಿದರು. ಸಮಾಜದಲ್ಲಿ ಅಸಮಾನತೆ ಇರುವವರೆಗೂ ನಿಜವಾದ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂದರು.* ಅರಸು ಜಾರಿಗೆ ತಂದ ಭೂ ಸುಧಾರಣೆ, ಮೀಸಲು ನೀತಿ, ಜೀತಪದ್ಧತಿ ನಿಷೇಧ, ಋಣಪರಿಹಾರ ಕಾಯಿದೆಗಳನ್ನು ನೆನೆಸಿಕೊಂಡರು. ಈ ವರ್ಷ ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್ ಆಯ್ಕೆಯಾಗಿದ್ದಾರೆ.* ಕಾರ್ಯಕ್ರಮದಲ್ಲಿ ಸಚಿವ ಶಿವರಾಜ್ ತಂಗಡಗಿ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ರೇವಣ್ಣ, ಮಧುಸೂದನ್ ನಾಯಕ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.