* ತಮಿಳುನಾಡು ಸರ್ಕಾರ ‘ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.* ಈ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರ ಮನೆ ಬಾಗಿಲಿಗೆ ಪಡಿತರ ಸಾಮಗ್ರಿಗಳನ್ನು ತಲುಪಿಸಲಾಗುತ್ತದೆ.* ಅಕ್ಕಿ, ಸಕ್ಕರೆ ಸೇರಿದಂತೆ ಅಗತ್ಯ ವಸ್ತುಗಳನ್ನು ತಿಂಗಳ ಪ್ರತಿ ಎರಡನೇ ಶನಿವಾರ ಮತ್ತು ಭಾನುವಾರ ವಿತರಿಸಲಾಗುವುದು.* ಈ ಯೋಜನೆಯ ಫಲಾನುಭವಿಗಳಲ್ಲಿ ಸುಮಾರು 20.42 ಲಕ್ಷ ಹಿರಿಯ ನಾಗರಿಕರು ಮತ್ತು 1.27 ಲಕ್ಷಕ್ಕೂ ಹೆಚ್ಚು ಅಂಗವಿಕಲರು ಒಳಗೊಂಡಿದ್ದಾರೆ. ಕಾರ್ಯಕ್ರಮವನ್ನು ಇಂದು (ಆಗಸ್ಟ್ 12) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಲಿದ್ದಾರೆ.* ಯೋಜನೆಯ ಕಾರ್ಯಕ್ರಮದಡಿ ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆ ಈಗಾಗಲೇ ಅಗತ್ಯ ವಿವರಗಳನ್ನು ಸಂಗ್ರಹಿಸಿದೆ. ಸರ್ಕಾರಕ್ಕೆ ಈ ಯೋಜನೆಯಿಂದ ₹30.16 ಕೋಟಿ ವೆಚ್ಚವಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.