* ತಮಿಳನಾಡು ಉಪ ಮುಖ್ಯಮಂತ್ರಿಯಾಗಿ ಸಚಿವ ಉದಯನಿಧಿ ಸ್ಟಾಲಿನ್ ಗೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪದೋನ್ನತಿ ನೀಡಿದ್ದಾರೆ. ರಾಜಭವನದಲ್ಲಿ ಸೆಪ್ಟೆಂಬರ್ 29 ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.* ಸಚಿವ ಸಂಪುಟವನ್ನು ಸೆ.28 ಪುನಾರಚನೆ ಮಾಡಿರುವ ಸಿಎಂ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವ ಉದಯ ನಿಧಿ ಅವರನ್ನು ಡಿಸಿಎಂ ಸ್ಥಾನಕ್ಕೆ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಕಳಿಸಿದ್ದ ಶಿಫಾರಸ್ಸು ಪತ್ರಕ್ಕೆ ರಾಜ್ಯಪಾಲರು  ಅನುಮೋದನೆ ನೀಡಿದ ಬೆನ್ನಲ್ಲೇ ಪದಗ್ರಹಣ ನಡೆಯಿತು.* ನಿಯೋಜಿತ ಉಪ ಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ ಅವರಿಗೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ, ಯೋಜನೆ ಮತ್ತು ಅಭಿವೃದ್ಧಿ ಖಾತೆ ನೀಡುವಂತೆ ತಮಿಳುನಾಡು ರಾಜ್ಯಪಾಲರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶಿಫಾರಸು ಮಾಡಿದ್ದಾರೆ.* ಉದಯನಿಧಿ ಸ್ಟಾಲಿನ್ ಅಲ್ಲದೇ ವಿ.ಸೆಂಥಿಲ್ ಬಾಲಾಜಿ, ಡಾ. ಗೋವಿ ಚೆಜಿಯಾನ್, ಆರ್.ರಾಜೇಂದ್ರನ್ ಮತ್ತು ಎಸ್.ಎಂ.ನಾಸರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಯ ಶಿಫಾರಸುಗಳನ್ನು ಅನುಮೋದಿಸಿದ್ದಾರೆ.