Job Description: * ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಕ್ಷೇತ್ರಗಳ ಪೈಕಿ 32 ಸ್ಥಾನಗಳನ್ನು ಪಡೆದುಕೊಂಡಿದ್ದು, ತ್ರಿಪುರಾ ಮುಖ್ಯಮಂತ್ರಿಯಾಗಿ ಮತ್ತೊಂಮ್ಮೆ ಬಿಜೆಪಿ ಪಕ್ಷದವರಾದ ಮಾಣಿಕ್ ಸಹಾ ಅವರು ಆಯ್ಕೆ ಆಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಣಿಕ್ ಅವರನ್ನು ಪುನರಾಯ್ಕೆ ಮಾಡಲಾಗಿದೆ.* ಮಾಣಿಕ್ ಸಹಾ ಅವರು ಮಾರ್ಚ್ 8 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.* ತ್ರಿಪುರಾ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಮಾಣಿಕ್ ಸಹಾ ಪ್ರಮಾಣ ಸ್ವೀಕಾರ ಕಾರ್ಯಕ್ರಮ ಮಾರ್ಚ್. 8 ಬುಧವಾರ ದಿನದಂದು ನಡೆಯಲಿದೆ. ಅದೇ ದಿನ ಸಚಿವರು ಕೂಡ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.