* ಟಾಟಾ ಗ್ರೂಪ್ ನ ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಲಿದ್ದಾರೆ. ಟಾಟಾ ಟ್ರಸ್ಟ್ನ ಹೊಸ ಉತ್ತರಾಧಿಕಾರಿಯಾಗಿ ನೋಯೆಲ್ ಟಾಟಾ ಅವರನ್ನು ಅವಿರೋಧವಾಗಿ ಅಕ್ಟೋಬರ್ 11 ರಂದು ಆಯ್ಕೆ ಮಾಡಲಾಯಿತು. * ಈ ಮೂಲಕ 403 ಬಿಲಿಯನ್ ಡಾಲರ್ ಟಾಟಾ ಆಸ್ತಿಯನ್ನು ನೋಡಿಕೊಳ್ಳಲಿದ್ದಾರೆ. ಸರ್ ರತನ್ ಟಾಟಾ ಟ್ರಸ್ಟ್‌ನ 6 ನೇ ಅಧ್ಯಕ್ಷರಾಗಿ ಮತ್ತು ಸರ್ ದೊರಾಬ್ಜಿ ಟಾಟಾ ಟ್ರಸ್ಟ್‌ನ 11 ನೇ ಅಧ್ಯಕ್ಷರಾಗಿ ನೇಮಿಸಲಾಗಿದೆ.* ನೋಯೆಲ್‌ ಅವರು ಟ್ರೆಂಟ್ ಮತ್ತು ಟಾಟಾ ಇನ್ವೆಸ್ಟ್‌ಮೆಂಟ್ ಕಾರ್ಪೊರೇಶನ್‌ನ ಅಧ್ಯಕ್ಷರಾಗಿದ್ದಾರೆ. ನೋಯೆಲ್ ಅವರು ಟೈಟಾನ್ ಕಂಪನಿ ಮತ್ತು ಟಾಟಾ ಸ್ಟೀಲ್‌ನ ಉಪಾಧ್ಯಕ್ಷರಾಗಿಯೂ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ.* ರತನ್‌ ಟಾಟಾ ಅವರ ತಂದೆ ನೇವಲ್ ಎರಡು ಮದುವೆಯಾಗಿದ್ದರು. ಮೊದಲ ಪತ್ನಿ ಸೂನಿ ಕಮಿಶರಿಯಟ್, ಎರಡನೇ ಪತ್ನಿ ಸ್ವಿಟ್ಜರ್ಲೆಂಡ್‌ನ ಉದ್ಯಮಿ ಸಿಮೋನ್ ಡ್ಯುನೊಯರ್‌. ನೇವಲ್ ಮತ್ತು ಸೂನಿ ದಂಪತಿಗೆ ರತನ್‌ ಮತ್ತು ಜಿಮ್ಮಿ ಟಾಟಾ ಜನಿಸಿದರು. * 1940 ರದಶಕದಲ್ಲಿ ನೇವಲ್ ಮತ್ತು ಸೂನಿ ದಂಪತಿ ಬೇರ್ಪಟ್ಟಿದ್ದರು. ಬೇರ್ಪಟ್ಟ ನಂತರ ಸಿಮೋನ್ ಡ್ಯುನೊಯರ್‌ ಅವರನ್ನು 1955 ರಲ್ಲಿ ನೇವಲ್ ವಿವಾಹವಾದರು. ಈ ದಂಪತಿಯ ಪುತ್ರನೇ ನೇಯಲ್‌ ಟಾಟಾ.* ಟಾಟಾ ಟ್ರಸ್ಟ್ಸ್, 14 ಟ್ರಸ್ಟ್‌ಗಳನ್ನು ನಿರ್ವಹಿಸುವ ಮತ್ತು ಟಾಟಾ ಸನ್ಸ್‌ನ ಶೇಕಡಾ 66 ರಷ್ಟು ಮಾಲೀಕತ್ವ ಹೊಂದಿರುವ ಸಂಸ್ಥೆಯಾಗಿದ್ದು, ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.* 2000 ರ ದಶಕದ ಆರಂಭದಲ್ಲಿ ಗುಂಪಿಗೆ ಸೇರಿದಾಗಿನಿಂದ ನೋಯೆಲ್ avaru ಅದರ ವಿಸ್ತರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, 2019 ರಲ್ಲಿ ರತನ್ ಟಾಟಾ ಟ್ರಸ್ಟ್‌ನ ಮಂಡಳಿಗೆ ಸೇರ್ಪಡೆಯಾದರು. 2018 ರಲ್ಲಿ ಟೈಟಾನ್ ಮತ್ತು 2022 ರಲ್ಲಿ ಟಾಟಾ ಸ್ಟೀಲ್‌ನ ಉಪಾಧ್ಯಕ್ಷರಾಗಿ ನೇಮಕಗೊಂಡರು.