* ಟೇಬಲ್ ಟೆನಿಸ್ ದಿಗ್ಗಜ ಅಚಂತ ಶರತ್ ಕಮಲ್ ಅವರು 20 ವರ್ಷದ ವೃತ್ತಿ ಜೀವನದ ಬಳಿಕ ನಿವೃತ್ತಿಯನ್ನು ಘೋಷಿಸಿದ್ದಾರೆ.* 42 ವರ್ಷದ ಅಚಂತ ಶರತ್ ಕಮಲ್ ಮಾರ್ಚ್ 25-30ರವರೆಗೆ ಚೆನ್ನೈನಲ್ಲಿ ನಡೆಯುವ ವಿಶ್ವ ಟೇಬಲ್ ಟೆನಿಸ್ ಟೂರ್ನಿಯು ತಮ್ಮ ವೃತ್ತಿ ಜೀವನದ ಕೊನೆಯ ಟೂರ್ನಿಯಾಗಿರಲಿದೆ ಎಂದು ಪ್ರಕಟಿಸಿದ್ದಾರೆ.* ಕಾಮನ್ವೆಲ್ತ್ ಗೇಮ್ಸ್ನಲ್ಲಿ ಏಳು ಚಿನ್ನದ ಪದಕಗಳನ್ನು ಜಯಿಸಿರುವ ಶರತ್, ಏಷ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕಗಳನ್ನು ಗೆದ್ದಿದ್ದಾರೆ.* ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಐದು ಬಾರಿ ಭಾರತವನ್ನು ಪ್ರತಿನಿಧಿಸಿರುವ ಶರತ್, ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಿದ್ದರು.* ಅಂತರರಾಷ್ಟ್ರೀಯ ಟೇಬಲ್ ಟೆನಿಸ್ ಫೆಡರೇಷನ್ (ಐಟಿಟಿಎಫ್) ರ್ಯಾಂಕಿಂಗ್ ಪಟ್ಟಿಯಲ್ಲಿ ಈಗಲೂ ಅತ್ಯುತ್ತಮ ಶ್ರೇಯಾಂಕ ಪಡೆದ ಭಾರತೀಯ ಆಟಗಾರ ಎಂಬ ಹಿರಿಮೆಗೆ ಶರತ್ ಭಾಜನರಾಗಿದ್ದಾರೆ.* ಅವರು ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ನಲ್ಲಿ ಪದಕ ಗಳಿಸಿದರೂ, ಒಲಿಂಪಿಕ್ಸ್ ಪದಕ ಗೆಲ್ಲುವ ಕನಸು ಉಳಿದಿದೆ ಎಂದು ತಿಳಿಸಿದ್ದಾರೆ. ಕಿರಿಯ ಪ್ರತಿಭೆಗಳ ಮೂಲಕ ಆ ಕನಸನ್ನು ಸಾಧಿಸುವ ಅವರು ಆಶಯ ವ್ಯಕ್ತಪಡಿಸಿದ್ದಾರೆ.