* ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಪ್ರಯಾಣಿಕರನ್ನು ಹತ್ಯೆ ಮಾಡುವುದನ್ನು ಅಮಾನವೀಯ ಕೃತ್ಯ ಎಂದು ಪ್ರತಿಪಾದಿಸಿ, ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡಬೇಕು ಎಂದು ಕರೆ ನೀಡಿದೆ.* ಭದ್ರತಾ ಮಂಡಳಿ, ಭಯೋತ್ಪಾದನೆ ಮತ್ತು ಉಗ್ರರ ಕೃತ್ಯಗಳಿಗೆ ಯಾವುದೇ ರೀತಿಯ ಬೆಂಬಲ ನೀಡಬಾರದು ಎಂದು ಹೇಳಿದೆ. ಇವು ಜಾಗತಿಕ ಶಾಂತಿ ವ್ಯವಸ್ಥೆಗೆ ಅಡ್ಡಿಯಾಗಿವೆ ಎಂದು ಘೋಷಿಸಿ, ಭಯೋತ್ಪಾದನೆ ನಿರ್ಮೂಲನೆಗೆ ದೇಶಗಳಾದರೂ ಒಗ್ಗೂಡಬೇಕು ಎಂದು ಒತ್ತಿ ಹೇಳಿದೆ. * ದಾಳಿಯ ಕಾರ್ಯಚರಣೆಯಲ್ಲಿ ಭಾಗಿಯಾದ ದುಷ್ಕರ್ಮಿಗಳು ಮತ್ತು ಅವರ ಪ್ರಾಯೋಜಕರನ್ನು ನ್ಯಾಯದ ಕಡಿವಾಣಕ್ಕೆ ತರುವ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಹೇಳಿದೆ.* ಭದ್ರತಾ ಮಂಡಳಿ ಎಲ್ಲಾ 15 ಸದಸ್ಯ ರಾಷ್ಟ್ರಗಳ ಪರವಾಗಿ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿದ್ದು, ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ ಮತ್ತು ಗಾಯಗೊಂಡವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದೆ.* ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಸಿಂಧೂ ಜಲ ಒಪ್ಪಂದವನ್ನು ಅಮಾನತುಪಡಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಭಾರತದಲ್ಲಿ 48 ಗಂಟೆಗಳೊಳಗೆ ದೇಶ ತೊರೆಯಲು ಸೂಚನೆ ನೀಡಿದೆ.