Job Description: * ವಿಶ್ವಸಂಸ್ಥೆ ಶೃಂಗಸಭೆಯ ವೇಳೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. * ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ ಭೇಟಿ ವೇಳೆ ಕೀವ್ ನಲ್ಲಿ ಮತ್ತು ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. * ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. * ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಭಯ ದೇಶಗಳ ನಡುವಣ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಳೆದ ತಿಂಗಳ ಉಕ್ರೇನ್ ಭೇಟಿ ವೇಳೆ ನಡೆದ ಮಾತುಕತೆಯನ್ನು ಫಲಪ್ರದವಾಗಿ ಜಾರಿಗೊಳಿಸಲು ಬದ್ಧರಾಗಿದ್ದೇವೆ. ಉಕ್ರೇನ್ ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೆ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. * ಎಕ್ಸ್ ನಲ್ಲಿ ಬರೆದುಕೊಂಡಿರುವ ಝೆಲೆನ್ ಸ್ಕಿ ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ವರ್ಷ ಮೂರನೇ ಬಾರಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದೇನೆ. ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಸಕ್ರಿಯವಾಗಿ ವೃದ್ಧಿಗೊಳಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಗಟ್ಟಿಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.