* ಮಲೇಷ್ಯಾದ ಕೌಲಾಲಂಪುರ್ದಲ್ಲಿ ನಡೆದ ಅಂಡರ್19 ಏಷ್ಯಾ ಕಪ್ ಮಹಿಳೆಯರ ಟಿ20 ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. * ಸಂಘಟಿತ ಆಟದ ಪ್ರದರ್ಶನ ನೀಡಿದ ನಿಕಿ ಪ್ರಸಾದ ಅವರ ಮುಂದಾಳತ್ವದ ತಂಡ ಬಾಂಗ್ಲಾದೇಶ ವಿರುದ್ಧ ಸ್ಪರ್ಧಾತ್ಮಕ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. * ಮಹತ್ವದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಗೊಂಗಡಿ ತ್ರಿಷಾ ಜಯದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಇವರು ಟೂರ್ನಿಯಲ್ಲಿ ನೀಡಿದ ಪ್ರದರ್ಶನಕ್ಕೆ ಸರಣಿ ಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ಸಹ ಲಭಿಸಿದೆ.* ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 7 ವಿಕೆಟ್ಗೆ 117 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಾಂಗ್ಲಾದೇಶ 18.3 ಓವರ್ಗಳಲ್ಲಿ 76 ರನ್ಗಳಿಗೆ ಆಲೌಟ್ ಆಯಿತು.* ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಆಟಗಾರ್ತಿ ಜಿ ಕಮಲಿನಿ ಹಾಗೂ ಸನಿಕಾ ಚಲ್ಕೆ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಮೂರನೇ ವಿಕೆಟ್ ಗೆ ಗೊಂಗಡಿ ತ್ರಿಷಾ ಹಾಗೂ ನಿಕಿ ಪ್ರಸಾದ್ ಜೋಡಿ ತಂಡಕ್ಕೆ ಕೊಂಚ ಆಧಾರವಾಯಿತು. ಈ ಜೋಡಿ 41 ರನ್ ಕಾಣಿಕೆ ನೀಡಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಶ್ರಮಿಸಿತು. ನಂತರ ಬಂದ ಈಶ್ವರಿ ಸಹ ಸಿಂಗಲ್ ಡಿಜಿಟ್ನಲ್ಲಿ ಆಟ ಮುಗಿಸಿದರು. * ಟೀಮ್ ಇಂಡಿಯಾದ ಪರ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಭರವಸೆಯ ಆಟಗಾರ್ತಿ ಗೊಂಗಡಿ ತ್ರಿಷಾ 47 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 52 ರನ್ ಬಾರಿಸಿ ಅಬ್ಬರಿಸಿದರು. ಬಾಂಗ್ಲಾದೇಶದ ಪರ ಫರ್ಜಾನಾ ಈಸ್ಮಿನ್ 4 ಹಾಗೂ ನಿಶಿತಾ ಅಕ್ಟರ್ ನಿಶಿ 2 ವಿಕೆಟ್ ಉರುಳಿಸಿದರು.