* ಭಾರತದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.* ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಆಗಸ್ಟ್ 12) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.* ಈ ಹುದ್ದೆ ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿತ್ತು. ಸೆಪ್ಟೆಂಬರ್ 9ರಂದು ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಅವರು, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಸೋಲಿಸಿದರು.* ಚುನಾವಣೆಯಲ್ಲಿ ರಾಧಾಕೃಷ್ಣನ್ ಅವರಿಗೆ 452 ಮತಗಳು ದೊರೆತವು. ಬಿ.ಸುದರ್ಶನ ರೆಡ್ಡಿ 300 ಮತಗಳನ್ನು ಗಳಿಸಿದರು. ಪ್ರಮಾಣವಚನದ ವೇಳೆ ಹಿರಿಯ ಸರ್ಕಾರಿ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.