* ಅಯೋಧ್ಯೆ ರೈಲ್ವೆ ನಿಲ್ದಾಣವನ್ನು "ಅಯೋಧ್ಯೆ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.* “ಇದೇ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿರುವ ಅಯೋಧ್ಯೆ ರೈಲು ನಿಲ್ದಾಣವನ್ನು ‘ಅಯೋಧ್ಯಾ ಧಾಮ್’ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ನಗರದ ಬಿಜೆಪಿ ಸಂಸದ ಲಲ್ಲು ಸಿಂಗ್ ಮಾಹಿತಿ ನೀಡಿದ್ದಾರೆ* ಹೊಸದಾಗಿ ನಿರ್ಮಿಸಲಾದ ಭವ್ಯವಾದ ಅಯೋಧ್ಯೆ ರೈಲು ನಿಲ್ದಾಣವದ ಹೆಸರನ್ನು ಸಾರ್ವಜನಿಕರ ನಿರೀಕ್ಷೆಯಂತೆ ಅಯೋಧ್ಯಾ ಧಾಮ ಜಂಕ್ಷನ್ ಎಂದು ಬದಲಾಯಿಸಲಾಗಿದೆ.* ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳನ್ನು ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.* 700 ವರ್ಷಗಳ ವಿವಾದಾತ್ಮಕ ಇತಿಹಾಸದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22, 2024 ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿಯನ್ನು ಸ್ಥಾಪಿಸಲಿದ್ದಾರೆ.